ಮೈಸೂರು: ಮೈಸೂರಿನ ರೂಪಾನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಅರ್ಥಪೂರ್ಣವಾಗಿ
ಆಚರಿಸಲಾಯಿತು.
ಸಂಘವು ಯಶಸ್ವಿಯಾಗಿ 3ನೇ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು, ಈ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರೂಪಾನಗರದ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು.
ಜೊತೆಗೆ ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಶಿಬಿರದಲ್ಲಿ ನಿವಾಸಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಸುಮಾರು 30 ದಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಕೆ.ಆರ್. ಆಸ್ಪತ್ರೆ, ರಕ್ತನಿಧಿಯ ಡಾ. ಕುಸುಮಾ ಮತ್ತು ಸಿಬ್ಬಂದಿ ಯಶಸ್ವಿಯಾಗಿ ತಮ್ಮ ಅಮೂಲ್ಯ ಸೇವೆಯನ್ನು ಸಲ್ಲಿಸಿ ರಕ್ತ ಸಂಗ್ರಹಿಸಿದರು.
ಕಾರ್ಯಕ್ರಮವು ಸಂಘದ ಅಧ್ಯಕ್ಷ ಎಂ.ಎನ್. ನರಸಿಂಹ ಮೂರ್ತಿಯವರ ಸ್ವಾಗತ ಭಾಷಣದೊಂದಿಗೆ ಪ್ರಾರಂಭವಾಯಿತು.
ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಘದ (SOTTO) ಮೈಸೂರು ವಲಯದ ಯೋಜನಾಧಿಕಾರಿಗಳಾದ ವಿಜಯ್ ಮತ್ತು ಚಂದು ಪಟೇಲ್ ಅವರು ಅಂಗಾಂಗ ದಾನದ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿ ಜಾಗೃತಿ ಮೂಡಿಸಿದರು.
ರೂಪಾನಗರ ನಿವಾಸಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಕ್ರಿಯವಾಗಿ ಸಂವಾದ ನಡೆಸಿದರು ಮತ್ತು ಅನೇಕರು,ಅಂಗಾಂಗ ದಾನ ಮಾಡಲು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.
ಸಂಪೂರ್ಣ ಕಾರ್ಯಕ್ರಮವನ್ನು ಸಂಘದ ಆರೋಗ್ಯ ಮತ್ತು ಯೋಗಕ್ಷೇಮ ವಿಭಾಗದ ನಿರ್ದೇಶಕಿ ಡಾ,ಸುಷ್ಮಾ ಅಯ್ಯಪ್ಪ ಆಯೋಜಿಸಿದ್ದರು.
ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರ ಕಾರ್ಯದರ್ಶಿ ರಾಘವೇಂದ್ರ,ಡಿ ಪ್ರಮಾಣಪತ್ರಗಳನ್ನು ವಿತರಿಸಿದರು.ಜಂಟಿ ಕಾರ್ಯದರ್ಶಿ ಪ್ರಿಯಾ ಶಶಿಧರನ್,ರಕ್ತದಾನಿ ಸಂತೋಷ್, ಉಪಾಧ್ಯಕ್ಷ ಸೂರ್ಯನಾರಾಯಣ್ ಮತ್ತಿತರರು ಹಾಜರಿದ್ದರು.
