ಮೈಸೂರು: ಚಾಮರಾಜನಗರ ಜಿಲ್ಲೆಯಲ್ಲಿ ಮೂರು ಜನರನ್ನು ಅರಣ್ಯಾಧಿಕಾರಿ ಗಳು ಶೂಟೌಟ್ ಮಾಡಿರುವುದನ್ನು ಖಂಡಿಸಿ ಚಾಮರಾಜನಗರ ಬಂದ್ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಬಂಧನ ಮತ್ತು ಸೇವೆಯಿಂದ ವಜಾಗೊಳಿಸ ಬೇಕು ಮತ್ತು ಸತ್ತವರ ಕುಟುಂಬಕ್ಕೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಹಾಗೂ ಸರ್ಕಾರಿ ಕೆಲಸ ಕೊಡಬೇಕು ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸರ್ಕಾರ ಇದನ್ನು ಈಡೇರಿಸದಿದ್ದರೆ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೆಲವೇ ದಿನಗಳಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರ ಜೊತೆ ಸಭೆ ಕರೆದು ಚರ್ಚಿಸಿ ಚಾಮರಾಜನಗರ ಬಂದ್ ಮಾಡಲು ದಿನಾಂಕ ನಿಗದಿ ಪಡಿಸಲಾಗುವುದು ಎಂದು ಕನ್ನಡ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.
