ಗದಗ: ಗದಗ ನಗರದಲ್ಲಿ 26 ವರ್ಷದ ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ ಎಸಗಿ, ಅಕ್ರಮವಾಗಿ ಗರ್ಭಪಾತ ಮಾಡಿಸಿದ ಅತ್ಯಂತ ಹೀನ ಪ್ರಕರಣ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗರ್ಭಪಾತ ಮಾಡಿಸಿದ ವೈದ್ಯ ಮತ್ತು ನರ್ಸ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.
ಮಾನಸಿಕ ಅಸ್ವಸ್ಥತೆಯು ಮೇಲೆ ನಾಲ್ವರು ಕಿರಾತಕರು ಬೇರೆ ಬೇರೆ ಸಂದರ್ಭಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು.
ಇದರಿಂದಾಗಿ ಆ ಮಹಿಳೆ ಗರ್ಭಿಣಿಯಾದಳು. ಮೂರು ತಿಂಗಳ ಗರ್ಭವನ್ನು ಆರ್.ಎಂ.ಪಿ ವೈದ್ಯ ಹಾಗೂ ನರ್ಸ್ ಸಹಾಯದಿಂದ ನಾಲ್ವರು ಕಿರಾತಕರು ಗರ್ಭಪಾತದ ಮಾತ್ರೆಗಳನ್ನು ನೀಡಿ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದರು .
ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಅಕ್ರಮ ಗರ್ಭಪಾತ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಸಂತ್ರಸ್ಥ ಮಹಿಳೆಗೆ ವೈದ್ಯಕೀಯ ಚಿಕಿತ್ಸೆ ಕೊಡಲಾಗಿದೆ ಜತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕೌನ್ಸೆಲಿಂಗ್ ನೀಡಲಾಗುತ್ತಿದೆ.
ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಸ್ಥಳೀಯ ಮುಖಂಡರು ಮತ್ತು ವೈದ್ಯರ ಚೀಟಿ ಇಲ್ಲದೆ ಮಾತ್ರೆ ಮಾರಾಟ ಮಾಡಿದ ಮೆಡಿಕಲ್ ಶಾಪ್ ಮಾಲೀಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
