ಮೈಸೂರು: ಮೈಸೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಯೂಥ್ ಮೋಟಿವೇಶನ್ ಟೀಮ್ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆ ಮಾಡಲಾಯಿತು.
ಮೈಸೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಲ್, ಆರ್.ಎಂ.ಸಿ. ಹತ್ತಿರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷರಾದ ಪೈಲ್ವಾನ್ ರವಿ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ದೇಶಭಕ್ತರು. ಅವರ ಧೈರ್ಯ, ಶಿಸ್ತು, ನಾಯಕತ್ವ ಮತ್ತು ರಾಷ್ಟ್ರಪ್ರೇಮ ಇಂದಿನ ಯುವಜನತೆಗೆ ಸದಾ ಪ್ರೇರಣೆಯಾಗಬೇಕು ಎಂದು ಹೇಳಿದರು.
ನೇತಾಜಿಯವರ ತ್ಯಾಗ, ಹೋರಾಟ ಮತ್ತು ದೇಶಭಕ್ತಿಯ ಆದರ್ಶಗಳನ್ನು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವಜನತೆ ಮಾದಕ ವ್ಯಸನಗಳಿಂದ ದೂರವಿದ್ದು, ಶಿಕ್ಷಣ, ಕ್ರೀಡೆ, ಸಮಾಜ ಸೇವೆ ಹಾಗೂ ದೇಶ ನಿರ್ಮಾಣದಂತಹ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಸ್.ಟಿ. ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ತ್ಯಾಗರಾಜ್, ಯೋಗ ಗುರುಗಳಾದ ಮಾಲ್ತೇಶ್, ನೇತಾಜಿ ಸುಭಾಷ್ ಚಂದ್ರ ಬೋಸ್ ಯೂಥ್ ಮೋಟಿವೇಶನ್ ಟೀಮ್ ಸಂಚಾಲಕರಾದ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯದರ್ಶಿಯಾದ ರಾಘವೇಂದ್ರ ಡಿ., ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶಾದನಹಳ್ಳಿ ವಿಜಯ್ ಕುಮಾರ್, ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶಪ್ರೇಮ, ತ್ಯಾಗ ಮತ್ತು ಆದರ್ಶಗಳನ್ನು ಯುವಜನರಲ್ಲಿ ಮೂಡಿಸುವ ಉದ್ದೇಶದಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಯೂಥ್ ಮೋಟಿವೇಶನ್ ಟೀಮ್ ಮೈಸೂರು ವತಿಯಿಂದ ಮುಂದಿನ ದಿನಗಳಲ್ಲಿಯೂ ವಿವಿಧ ಸಮಾಜಮುಖಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಟೀಮ್ ನವರು ತಿಳಿಸಿದರು.
