ಕೋಲ್ಕತ್ತಾ: ಕೋಲ್ಕತ್ತಾದ ಫ್ರೀ ಸ್ಕೂಲ್ ಸ್ಟ್ರೀಟ್ನಲ್ಲಿರುವ ಹೋಟೆಲ್ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ ಒಂದು ಮಗು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ
ಪಶ್ಚಿಮ ಬಂಗಾಳದ ಮಧ್ಯ ಕೋಲ್ಕತ್ತಾದ ಮಿರ್ಜಾ ಗಾಲಿಬ್ ಸ್ಟ್ರೀಟ್ ನಲ್ಲಿರುವ ಹೋಟೆಲ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಇದರಿಂದಾಗಿ ದಟ್ಟವಾದ ಹೊಗೆಯುಂಟಾಗಿ ಒಂದು ಮಗು ಸೇರಿದಂತೆ ಒಂಬತ್ತು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಈ ಅವಘಡದಲ್ಲಿ ಹಲವಾರು ಜನರು ಗಂಭೀರವಾಗಿ ಸುಟ್ಟು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ ಬೆಂಕಿ ಶಾರ್ಟ್ ಸರ್ಕ್ಯೂಟ್ ಅಥವಾ ಹವಾನಿಯಂತ್ರಣ ಘಟಕದಲ್ಲಿನ ಸ್ಫೋಟದಿಂದ ಉಂಟಾಗಿದೆ ಎಂದು ತಿಳಿದುಬಂದಿದೆ.
