ಮೈಸೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ ಉತ್ತಮ ಆರೋಗ್ಯ ಅಭಿವೃದ್ಧಿಗೆ ರಹದಾರಿಯಾಗಿದೆ ಎಂದು ಉಡುಪಿ ಶ್ರೀ ಕಣಿಯೂರು ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳು ಹೇಳಿದರು.
ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ,ಚಿಕಿತ್ಸೆ ಒದಗಿಸುವುದು ಶಿಬಿರದ ಉದ್ದೇಶವಾಗಿದೆ ಎಂದು ತಿಳಿಸಿದರು.
ನಗರದ ಸರಸ್ವತಿಪುರಂನಲ್ಲಿರುವ
ಶ್ರೀ ಕೃಷ್ಣದಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ 35ನೇ ಚಾತುರ್ಮಾಸದ ಅಂಗವಾಗಿ
ಕ್ಲಿಯರ್ ಮೇಡಿ ರೇಡಿಯಂಟಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವಾಸನ್ ಐ ಕೇರ್ ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಭಾನುವಾರ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶ್ರೀಗಳು ಮಾತನಾಡಿದರು.
ಅನೇಕ ವೈದ್ಯ ವೃಂದವು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿದ್ದಾರೆ. ಬಡವರ,ಸಾಮಾನ್ಯರ ಪಾಲಿಗೆ ಇಂತಹ ವೈದ್ಯಕೀಯ ಶಿಬಿರವು ಉಪಯುಕ್ತವಾಗಿದೆ. ಕೋವಿಡ್ ನಂತರ ಆರೋಗ್ಯ ಸೇವೆಯಲ್ಲಿ ಅನೇಕ ಬದಲಾವಣೆಗಳನ್ನು ಕಂಡಿದ್ದೇವೆ. ಇಂತಹ ಉಚಿತ ಆರೋಗ್ಯ ಶಿಬಿರವನ್ನು ಪ್ರತಿ ತಿಂಗಳು ಮಾಡುವ ಸದುದ್ದೇಶವಿದೆ. ಆರೋಗ್ಯದಲ್ಲಿ ಮುಂದೆ ಬರಬಹುದಾದ ಸವಾಲುಗಳಿಗೆ ಇಂದೇ ಸೂಕ್ತ ಪರಿಹಾರ ಕಂಡುಕೊಳ್ಳಲು ಇಂತಹ ಶಿಬಿರ ಸಹಕಾರಿಯಾಗಿದೆ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಹೇಳಿದರು.
ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ 100ಕ್ಕೂ ಹೆಚ್ಚು ಸಾರ್ವಜನಿಕರು ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಸದ್ಬಳಕೆ ಮಾಡಿಕೊಂಡರು, 35 ಯೂನಿಟ್ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು
ಈ ಸಂದರ್ಭದಲ್ಲಿ ಶ್ರೀಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷರಾದ ಶ್ರೀವತ್ಸ, ಕಾರ್ಯದರ್ಶಿ ರಾಘವೇಂದ್ರ ರಾವ್, ಖಜಾಂಜಿ ಸುರೇಶ್ ರಾವ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತ್ರಿ,ಪಿ ಎಸ್ ಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್, ಕೆ ಎಸ್ ಗುರುರಾಜ್ ,ಕೃಷ್ಣ ದಾಸ್ ಪುರಾಣಿಕ್ , ಮಂಗಳ ಅಭ್ಯಂಕರ್
ಹಾಗೂ ಸದಸ್ಯರು ಮತ್ತಿತರರು ಹಾಜರಿದ್ದರು.
