ಮೈಸೂರು: ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಉಡುಪಿ ಶ್ರೀ ಕಣಿಯೂರು ಮಠದ ಪೀಠಾಧಿಪತಿ ಪೂಜ್ಯ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳ ವರ 35ನೇ ವರ್ಷದ ಚಾತುರ್ಮಾಸ್ಯ ವ್ರತದ
ಪ್ರಯುಕ್ತ ನಾಳೆ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಿದುಷಿ ಸ್ಪೂರ್ತಿ ರಾವ್ ಅವರಿಂದ ಭಕ್ತಿ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮವನ್ನು
ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ದಾಮದಲ್ಲಿ ಸೋಮವಾರ ಸಂಜೆ 7 ಗಂಟೆಗೆ ಆಯೋಜಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕೆಂದು ಪ್ರಕಟಣೆ ಮೂಲಕ ಶ್ರೀಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಶ್ರೀವತ್ಸ ಮನವಿ ಮಾಡಿದ್ದಾರೆ.
