ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಭಾಗ್ಯಶ್ರೀ(35) ಸತ್ಯಮ್ಮ(30) ಹೊನ್ನಿಂಗಮ್ಮ(18) ಮೃತ ಕೂಲಿ ಕಾರ್ಮಿಕರು.
ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೋ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬೆಳಗಿನ ಜಾವವೇ ಕೂಲಿ ಕೆಲಸಕ್ಕೆ ತೆರಳಿದ್ದ ನತದೃಷ್ಟ ಕಾರ್ಮಿಕರು ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
ಮಡ್ನಾಳ್ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರಲ್ಲಿ ಅಪಘಾತವಾಗಿ ಮೂವರು ಮೃತಪಟ್ಟರೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೀ.ಗುಡಿ ಪಿಎಸ್ಐ ದೇವಿಂದ್ರರೆಡ್ಡಿ ಭೇಟಿ ನೀಡಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
