ಮೈಸೂರು: ನಾಳೆ ಸಂಜೆ 7 ಕ್ಕೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರಿಂದ
ಸಂಕಟದಲ್ಲಿ ಒಗ್ಗಟ್ಟೇ ಮೂಲಮಂತ್ರ ವಿಷಯದ ಕುರಿತು ಭಾಷಣ ಕಾರ್ಯಕ್ರಮ
ಸರಸ್ವತಿಪುರಂ ಶ್ರೀ ಕೃಷ್ಣ ದಾಮದಲ್ಲಿ ಏರ್ಪಡಿಸಲಾಗಿದೆ.
ಶ್ರೀ ಕೃಷ್ಣ ಟ್ರಸ್ಟ್, ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯಸಮಿತಿ
ವತಿಯಿಂದ ಉಡುಪಿ ಕಾಣಿಯೂರು ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದಂಗಳವರ 35ನೇ ವರ್ಷದ ಚಾತುರ್ಮಾಸ್ಯ ವ್ರತದ
ಅಂಗವಾಗಿ ಈ ಭಾಷಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕೆಂದು ಪ್ರಕಟಣೆಯ ಮೂಲಕ ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರು ಹಾಗೂ ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷರಾದ ರವಿಶಾಸ್ತ್ರಿ ಮನವಿ ಮಾಡಿದ್ದಾರೆ.
