ಮೈಸೂರು: ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಂಗವಾಗಿ ಕರಡು ಮತದಾರರ ಪಟ್ಟಿಯನ್ನು ಆ.24 ರಂದು ಇ ಆರ್ ಒ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಸದರಿ ಕರಡು ಮತದಾರರ ಪಟ್ಟಿಯನ್ನು ಕಚೇರಿಯ ನೋಟಿಸ್ ಬೋರ್ಡ್ನಲ್ಲಿ ಪ್ರದರ್ಶಿಸಿ ಸಾರ್ವಜನಿಕರ ಗಮನಕ್ಕೆ ತರಲಾಗಿದೆ.
ಈ ಹಿನ್ನೆಲೆಯಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ರಾಷ್ಟ್ರೀಯ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯನ್ನು ನಡೆಸಿ ಸಭೆಯಲ್ಲಿ ಕರಡು ಮತದಾರರ ಪಟ್ಟಿಯ ಪ್ರಕಟಣೆ ಹಾಗೂ ಮುಂದಿನ ಎಸ್ ಐ ಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಲಾಯಿತು.
ಸಭೆಯಲ್ಲಿ ವಿಶೇಷವಾಗಿ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆ ಹಾಗೂ ಪರಿಶೀಲನೆ, ನೋಟಿಸ್ ನೀಡುವ ಪ್ರಕ್ರಿಯೆ, ಹೆಚ್ಚುವರಿ AERO ಗಳ ನೇಮಕಾತಿ ಹಾಗೂ ಇದುವರೆಗೆ ಕ್ಷೇತ್ರದಲ್ಲಿ ಕೈಗೊಳ್ಳಲಾಗಿರುವ ಎಸ್ಐಆರ್ ಪ್ರಕ್ರಿಯೆ ಪ್ರಗತಿ ಕುರಿತು ರಾಜಕೀಯ ಪಕ್ಷಗಳ ಮುಖಂಡರಿಗೆ ವಿವರಿಸಲಾಯಿತು.
ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 3,27,898 ಮತದಾರರಿಗೆ Enumeration Forms ವಿತರಿಸಲಾಗಿದ್ದು, ಶೇ.100ರಷ್ಟು ವಿತರಣೆ ಪೂರ್ಣಗೊಂಡಿದೆ. ಈ ಪೈಕಿ 2,28,543 Enumeration Forms ಡಿಜಿಟೈಜ್ ಮಾಡಲಾಗಿದ್ದು, ಶೇ.69.70ರಷ್ಟು ಪ್ರಗತಿ ಸಾಧಿಸಲಾಗಿದೆ.
ಇದುವರೆಗೆ 99,355 ಮತದಾರರನ್ನು ASDDO ವರ್ಗದಲ್ಲಿ ಗುರುತಿಸಲಾಗಿದ್ದು, EFs ಡಿಜಿಟೈಜೇಶನ್ ಮತ್ತು ASDDO ಗುರುತಿಸುವಿಕೆ ಸೇರಿದಂತೆ ಒಟ್ಟು ಪ್ರಕ್ರಿಯೆ ಪೂರ್ಣಗೊಂಡಿದೆ.
ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 2,28,543 ಮತದಾರರು ಇದ್ದು, ಇವರಲ್ಲಿ 1,09,555 ಪುರುಷರು, 1,18,957 ಮಹಿಳೆಯರು ಹಾಗೂ 31 ತೃತೀಯ ಲಿಂಗದ ಮತದಾರರು ಇದ್ದಾರೆ.
ಇದುವರೆಗೆ ಪೂರ್ಣಗೊಂಡಿರುವ Anomalies, No Mapping ಹಾಗೂ ಇತರೆ SIR ಸಂಬಂಧಿತ ಪ್ರಕ್ರಿಯೆಗಳ ಪ್ರಗತಿಯ ಅಂಕಿಅಂಶಗಳನ್ನು ಸಭೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳಿಗೆ ವಿವರಿಸಲಾಯಿತು. ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ 21,125 Anomalies ಮತ್ತು 560 No Mapping ಪ್ರಕರಣಗಳು ದಾಖಲಾಗಿವೆ.
ಮತದಾರರು ತಮ್ಮ ಅರ್ಹತೆಯನ್ನು ಸಾಬೀತುಪಡಿಸುವ ಸಲುವಾಗಿ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು ಹಾಗೂ ಸಂಬಂಧಿತ ಪರಿಶೀಲನಾ ಪ್ರಕ್ರಿಯೆಗಳ ಕುರಿತು ರಾಜಕೀಯ ಪಕ್ಷಗಳ ಮುಖಂಡರಿಗೆ ವಿವರವಾಗಿ ತಿಳಿಸಲಾಯಿತು.
ಹಕ್ಕು ಮತ್ತು ಆಕ್ಷೇಪಣೆಗಳ ಸ್ವೀಕೃತಿ, ಪರಿಶೀಲನೆ ಹಾಗೂ ಅಗತ್ಯವಿರುವ ಪ್ರಕರಣಗಳಲ್ಲಿ ನೋಟಿಸ್ ನೀಡುವ ಪ್ರಕ್ರಿಯೆಯನ್ನು ನಿಯಮಾನುಸಾರ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿಯ ಪ್ರತಿಗಳನ್ನು ಎಲ್ಲಾ ರಾಷ್ಟ್ರೀಯ ರಾಜಕೀಯ ಪಕ್ಷಗಳ ಮುಖಂಡರು/ಪ್ರತಿನಿಧಿಗಳಿಗೆ ಹಸ್ತಾಂತರಿಸಲಾಯಿತು. ಪಟ್ಟಿಯನ್ನು ಸ್ವೀಕರಿಸಿರುವ ಬಗ್ಗೆ ಸಂಬಂಧಪಟ್ಟ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಸ್ವೀಕೃತಿಯನ್ನು ಪಡೆಯಲಾಯಿತು.
ಈ ಮೂಲಕ SIR ಪ್ರಕ್ರಿಯೆಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪದಾಧಿಕಾರಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದ್ದು, ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸಮನ್ವಯತೆ ಹಾಗೂ ರಾಜಕೀಯ ಪಕ್ಷಗಳ ಸಹಭಾಗಿತ್ವವನ್ನು ಖಚಿತಪಡಿಸಲಾಗಿದೆ.
ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು 24.08.2026ರಿಂದ 23.09.2026ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವ ಅರ್ಹ ಮತದಾರರು ಅಥವಾ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಅಗತ್ಯವಿರುವವರು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಕ್ಕು/ಆಕ್ಷೇಪಣೆ ಸಲ್ಲಿಸುವಂತೆ ಕೋರಲಾಗಿದೆ.
ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಂಬಂಧಪಟ್ಟ ERO/AERO ಕಚೇರಿಗಳಲ್ಲಿ ಹಾಗೂ ನಿಗದಿತ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
SIR ಪ್ರಕ್ರಿಯೆಯ ಅರ್ಹತಾ ದಿನಾಂಕ 01.10.2026 ಆಗಿದ್ದು, ಹಕ್ಕು ಮತ್ತು ಆಕ್ಷೇಪಣೆಗಳ ಪರಿಶೀಲನೆಯ ನಂತರ ಅಂತಿಮ ಮತದಾರರ ಪಟ್ಟಿಯನ್ನು 27.10.2026ರಂದು ಪ್ರಕಟಿಸಲು ನಿಗದಿಪಡಿಸಲಾಗಿದೆ ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರ ಚುನಾವಣಾ ನೋಂದಣಾಧಿಕಾರಿ ವೆಂಕಟೇಶ್ ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
