ಮೈಸೂರು: ಶುಕ್ರವಾರ ಶ್ರೀ ಕೃಷ್ಣಧಾಮದಲ್ಲಿ
ವಿದುಷಿ ಎಂ ಆರ್ ಸುಧಾ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿ
ವತಿಯಿಂದ ಉಡುಪಿ ಕಾಣಿಯೂರು ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರ 35ನೇ ಚಾತುರ್ಮಾಸ್ಯ ಅಂಗವಾಗಿ ವಿದುಷಿ ಎಂ ಆರ್ ಸುಧಾ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಸರಸ್ವತಿಪುರಂ ಶ್ರೀ ಕೃಷ್ಣ ದಾಮದಲ್ಲಿ ಆಗಸ್ಟ್ 28ರ ಶುಕ್ರವಾರ ಸಂಜೆ 7 ಗಂಟೆಗೆ ಆಯೋಜಿಸಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕೆಂದು ಪ್ರಕಟಣೆಯ ಮೂಲಕ ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರು ಹಾಗೂ ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷರಾದ ರವಿಶಾಸ್ತ್ರಿ ಮನವಿ ಮಾಡಿದ್ದಾರೆ
