ಮೈಸೂರು: ಮೈಸೂರಿನ ಮೇಟಗಳ್ಳಿಯ ಸರ್ಕಾರಿ ಶಾಲೆ ಆವರಣದಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಮೇಟಗಳ್ಳಿ ನಿವಾಸಿ ಕೃಷ್ಣಪ್ಪ ಅವರ ಮಗ ಸಂತೋಷ್ (35) ಮೃತ ವ್ಯಕ್ತಿ, ಖಾಸಗಿ ಕಾರ್ಖಾನೆಯಲ್ಲಿ ನೌಕರನಾಗಿದ್ದರು ಎಂದು ತಿಳಿದುಬಂದಿದೆ.ಅ
ಶಾಲೆ ಆವರಣದಲ್ಲಿರುವ ಗೇಟ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆದರೆ ನೇಣು ಬಿಗಿದಿದ್ದರೂ ನೆಲದ ಮೇಲೆ ಕುಳಿತಿರುವ ಸ್ಥಿತಿಯಲ್ಲಿ ಶವ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸಂತೋಷ್ ಸಾವಿನ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಮೇಟಗಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
