ಯಾದಗಿರಿ: ಯಾದಗಿರಿ ಜಿಲ್ಲೆ ಆರು ತಾಲೂಕುಗಳ ಪೈಕಿ ಶಹಾಪುರ ಹೊರತು ಪಡಿಸಿ ಐದು ತಾಲೂಕುಗಳನ್ನು ಸರ್ಕಾರ ಕೈಬಿಟ್ಟಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್ ಯಶಸ್ಸಿಯಾಗಿದೆ.
ಬೆಳಗಿನಿಂದಲೇ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಕ ವ್ಯಕ್ತಪಡಿಸಿದವು.ಕೆಲವು ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.
ಐದು ತಾಲ್ಲೂಕು ಗಳನ್ನು ಸರಕಾರ ಬರ ಪಟ್ಟಿಗೆ ಸೇರ್ಪಡೆ ಮಾಡಿ ರೈತರಿಗೆ ಬೆಳೆ ಪರಿಹಾರ ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಸಂಘಟನೆಗಳು ಬಂದ್ ಪರವಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.
ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಈಗಾಗಲೇ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿ, ಬರ ವಿಕ್ಷೀಸಿದ್ದಾರೆ, ಆದರೆ ರೈತಾಪಿ ವರ್ಗ ತೀವ್ರ ಸಂಕಷ್ಟದಲ್ಲಿರುವ ನಮ್ಮ ಜಿಲ್ಲೆಗೆ ಭೇಟಿ ನೀಡಿಲ್ಲ, ಅಲ್ಲದೇ ರಾಜ್ಯದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆ ಮಾಡಿದ್ದು, ಆ ಪಟ್ಟಿಯಲ್ಲಿ ಜಿಲ್ಲೆಯ ೫ ತಾಲ್ಲೂಕುಗಳನ್ನು ಕೈ ಬಿಟ್ಟಿದ್ದಾರೆ, ಇದು ರೈತಾಪಿ ವರ್ಗಕ್ಕೆ ಸರ್ಕಾರ ಮಾಡಿದ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಕಲುಬುರಗಿ ಐಜಿಪಿ ಶಾಂತನು ಸಿನ್ಹಾ, ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಆಗಮಿಸಿ ಮನವಿ ಪತ್ರ ಸ್ವಿಕರಿಸಿದರು.
