ಮೈಸೂರು: ಮೈಸೂರಿನ ಸರಸ್ವತಿಪುರಂ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ನಾಳೆ ಬುಧವಾರ ಸಂಜೆ 7 ಗಂಟೆಗೆ ಶ್ರೀಮತಿ ಅಪರ್ಣಾ ನರೇಂದ್ರ ಮತ್ತು ತಂಡದವರಿಂದ ಭಕ್ತಿ ಸುಧಾರಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿ
ವತಿಯಿಂದ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರ 35ನೇ ಚಾತುರ್ಮಾಸ್ಯ ಅಂಗವಾಗಿ ಶ್ರೀಮತಿ ಅಪರ್ಣಾ ನರೇಂದ್ರ ಮತ್ತು ತಂಡದವರಿಂದ ಭಕ್ತಿ ಸುಧಾರಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಪ್ರಕಟಣೆಯ ಮೂಲಕ ಶ್ರೀ ಕೃಷ್ಣ ಟ್ರಸ್ಟ್ ಚಾತುರ್ಮಾಸ್ಯ ಸಮಿತಿ ತಿಳಿಸಿದೆ.
