ಚಾಮರಾಜನಗರ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಹಯೋಗದಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್ ಅವರು ತಾ. ಪಂ ಆವರಣದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ನೋಡಲ್ ಅಧಿಕಾರಿ ಡಿ.ಸಿ ಶೃತಿ ಅವರು ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರಿಧರ್, ಸಹಾಯಕ ನಿರ್ದೇಶಕರಾದ ಪ್ರಕಾಶ್ ಕುಮಾರ್, ಮತ್ತಿತರರು ಹಾಜರಿದ್ದರು.
