ಮೈಸೂರು: ಮೈಸೂರಿನ ಪಡುವಾರಳ್ಳಿ ಬಬ್ರುವಾಹನ ಕನ್ನಡ ಯುವಕರ ಸಂಘದ ವತಿಯಿಂದ 10ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು.
ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೂಜ್ಯ ಜಗದ್ಗುರು ಡಾ.ಶ್ರೀ ನಿಶ್ಚಲಾನಂದ ನಾಥ ಸ್ವಾಮೀಜಿ ಅವರು ಆಗಮಿಸಿ ಆಶೀರ್ವಚನ ನೀಡಿದ್ದು ವಿಶೇಷ.
ಸಂಜೆ ಸುಮಾರು 5 ಸಾವಿರ ಭಕ್ತಾದಿಗಳಿಗೆ ವಿಶೇಷ ಭೂರಿ ಭೋಜನ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಜಿ ಗಂಗಾಧರ್, ಜಿಲ್ಲಾ ಒಕ್ಕಲಿಗ ಸಂಘದ ಮರಿಸ್ವಾಮಿ, ತೇಜೇಶ್ ಲೋಕೇಶ್ ಗೌಡ, ಯೋಗಾನಂದ , ಶಿವಣ್ಣ,ರಾಮಣ್ಣ, ಸುರೇಶ್, ಕುಮಾರ್ ಗೌಡ ಮತ್ತಿತರರು ಉಪಸ್ಥಿತರಿದ್ದರು.
