ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರದಲ್ಲಿರುವ ಸುತ್ತೂರು ಶ್ರೀಕ್ಷೇತ್ರಕ್ಕೆ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಭೇಟಿ ನೀಡಿದರು.
ಸುತ್ತೂರಿನಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಕರ್ತೃ ಗದ್ದುಗೆಯಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸುತ್ತೂರು ಮಠದ ಕಿರಿಯ ಶ್ರೀಗಳಾದ ಜಯರಾಜೇಂದ್ರ ಸ್ವಾಮೀಜಿ, ವಿವಿಧ ಮಠಾಧೀಶರು, ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿಗಳಾದ ಮಂಜು, ಕಾರ್ಯದರ್ಶಿ-2 ಶಿವಕುಮಾರ್, ಸುತ್ತೂರು ಜೆಎಸ್ಎಸ್ ಸಂಸ್ಥೆಗಳ ಆಡಳಿತಾಧಿಕಾರಿ ಉದಯ್, ಸಹಾಯಕ ಆಡಳಿತಾಧಿಕಾರಿ ಜಿ.ಎಲ್. ತ್ರಿಪುರಾಂತಕ, ಸಹಾಯಕ ಸಂಯೋಜನಾಧಿಕಾರಿ ವೀರಭದ್ರಯ್ಯ ಮತ್ತಿತರ ಹಾಜರಿದ್ದರು.
