ಮೈಸೂರು: ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
ಇಂದು ಮೈಸೂರಿಗೆ ಆಗಮಿಸಿದ್ದ ರಜಿನಿಕಾಂತ್, ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಅರ್ಚಕರು ಅವರಿಗೆ ಕುಂಕುಮ, ಪ್ರಸಾದ ನೀಡಿ ಸ್ವಾಗತಿಸಿದರು.
ಈ ವೇಳೆ ದೇವಾಲಯದ ಆವರಣದಲ್ಲಿ ಅಭಿಮಾನಿಗಳು ನೆರೆದಿದ್ದು, ರಜಿನಿಕಾಂತ್ ಅವರನ್ನು ಕಂಡು ಜಯಘೋಷ ಹಾಕಿದರು. ಅಭಿಮಾನಿಗಳತ್ತ ಕೈಬೀಸಿ ರಜಿನಿಕಾಂತ್ ಶುಭ ಹಾರೈಸಿದರು.
ದರ್ಶನದ ಬಳಿಕ ಮಾತನಾಡಿದ ಅವರು, ಚಾಮುಂಡಿ ತಾಯಿಯ ದರ್ಶನದಿಂದ ಮನಸ್ಸಿಗೆ ನೆಮ್ಮದಿ ಸಿಕ್ಕಿದೆ, ನಾಡಿನ ಜನರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.
ಚಾಮುಂಡಿ ಬೆಟ್ಟಕ್ಕೆ ರಜಿನಿಕಾಂತ್ ಭೇಟಿ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಮಾಡಿದ್ದರು.
