ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕಾಗಿ ನಗರಕ್ಕೆ ಲಕ್ಷಾಂತರ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅಧ್ಯಕ್ಷತೆಯಲ್ಲಿ ಹೋಟೆಲ್ ಮಾಲೀಕರ ಸಭೆ ನಡೆಸಲಾಯಿತು.
ಸಭೆಯಲ್ಲಿ ಪ್ರವಾಸಿಗರ ಸೂಕ್ತ ದಾಖಲೆಗಳ ಪರಿಶೀಲನೆ, ಸಿಸಿಟಿವಿ ಕ್ಯಾಮೆರಾಗಳ ಸುಸ್ಥಿತಿ ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಹೋಟೆಲ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಸೀಮಾ ಲಾಟ್ಕರ್ ನೀಡಿದರು.
ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
