ಚಾಮರಾಜನಗರ: ಕಾರು ಮತ್ತು ಲಾರಿ ಡಿಕ್ಕಿಯಾಗಿ ಗ್ರಾಮಾಡಳಿತಾಧಿಕಾರಿ ಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಮದ್ಯಾಹ್ನ ನಡೆದಿದೆ.
ಗ್ರಾಮಾಡಳಿತಾಧಿಕಾರಿ ಮಹೇಶ್ (48) ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಚಾಮರಾಜನಗರ-ಸಂತೇಮರಹಳ್ಳಿ ನಡುವಿನ ರಾಷ್ಟ್ರೀಯ ಹೆದಾರಿಯಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತವಾಗಿದೆ.
ಮೃತದೇಹವನ್ನು ಸಿಮ್ಸ್ ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಮೃತ ಮಹೇಶ್ ಅವರು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮಾಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ. ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
