ನಂಜನಗೂಡು: ನಂಜನಗೂಡು ತಾಲೂಕಿನ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಆಸಕ್ತಿ, ಸಾಮಾನ್ಯ ಜ್ಞಾನ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.
ಈ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ. ಆರ್. ದಿನೇಶ್ ಅವರು ಮಾತನಾಡಿ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆಯ ಆಸಕ್ತಿ, ತಾರ್ಕಿಕ ಚಿಂತನೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು.
ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಇಂತಹ ಶೈಕ್ಷಣಿಕ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಪಠ್ಯಪುಸ್ತಕದ ಅಧ್ಯಯನದ ಜೊತೆಗೆ ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಂಡು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕು ಎಂದು ಸಿ.ಆರ್.ದಿನೇಶ್ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಲಿಂಗಣ್ಣ ಸ್ವಾಮಿ, ರಂಗಸ್ವಾಮಿ, ಅಂಕಶಟ್ಟಿ ,ಸುಶೀಲಾ, ಕಾರ್ಯಕ್ರಮದ ಸಂಯೋಜಕರಾದ ಎಚ್ ಕೆ ಸ್ವಾಮಿ ಗೌಡ ಮತ್ತು ಸಹನಾ ಉಪಸ್ಥಿತರಿದ್ದರು.
ಸಂಜಯ್ ಎಸ್- ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ನಂಜನಗೂಡು,
ಶಾಬಿರ್ ಪಾಷಾ- ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ನಂಜನಗೂಡು.
ತನುಷ್ಕಾ ಎಂ- ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ನಂಜನಗೂಡು.
ವರ್ಷಿಣಿ ಎಸ್- ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ನಂಜನಗೂಡು.
ಚೈತನ್ಯ ಪಿ- ಸಿಟಿಜನ್ಸ್ ಪದವಿಪೂರ್ವ ಕಾಲೇಜು ಈ ಐದು ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ.
