ಮೈಸೂರು: ಮೈಸೂರು ಅರಮನೆ ಹಾಗೂ ಚಿನ್ನದ ಅಂಬಾರಿ ಯಾರಿಗೆ ಸೇರಿದ್ದು ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅರಮನೆ ಸರ್ಕಾರಕ್ಕೆ ಸೇರಿದ ಆಸ್ತಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ನೆಟ್ಟಿಗರು ಯತೀಂದ್ರ ಹೇಳಿಕೆಗೆ ಚಾಟಿ ಬೀಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪರವಾಗಿ ಜನರು ಧ್ವನಿ ಎತ್ತಿದ್ದು,ನಿಮ್ಮ ಜೊತೆ ನಾವಿದ್ದೇವೆ ಎಂಬ ಪೋಸ್ಟರ್ಗಳು ವೈರಲ್ ಆಗುತ್ತಿವೆ.ರಾಜಮಾತೆ ಪ್ರಮೋದಾದೇವಿಗೆ ಜೈ ಎಂಬ ಘೋಷಣೆಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
ಮೈಸೂರು ಸಂಸ್ಥಾನಕ್ಕೆ ಮೈಸೂರು ರಾಜರ ಕೊಡುಗೆ ಅಪಾರವಾಗಿದ್ದು, ಇತಿಹಾಸ ತಿಳಿಯದೆ ಮಾತನಾಡಬೇಡಿ, ನ್ಯಾಯಾಲಯದ ಆದೇಶವನ್ನು ಗಮನಿಸಿ ಮಾತನಾಡಿ ಎಂದು ನೆಟ್ಟಿಗರು ಸಚಿವ ಯತೀಂದ್ರ ಅವರಿಗೆ ಟಾಂಗ್ ನೀಡಿದ್ದಾರೆ.
ಅರಮನೆ ಹಾಗೂ ಅಂಬಾರಿಯ ಮಾಲೀಕತ್ವದ ಕುರಿತು ಈ ಹಿಂದೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಈ ಬಗ್ಗೆ ಸ್ಪಷ್ಟ ಆದೇಶಗಳಿದ್ದರೂ ಸಚಿವರು ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ.
