ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರ ಜನ್ಮದಿನದ ಪ್ರಯುಕ್ತ ಪಾತಿ ಫೌಂಡೇಶನ್ ವತಿಯಿಂದ ಸಾರ್ವಜನಿಕರಿಗೆ ಉಚಿತವಾಗಿ ಕಬ್ಬಿನ ಹಾಲು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ನಗರ ಪಾಲಿಕೆ ಸದಸ್ಯರಾದ ಎಂ.ಡಿ. ಪಾರ್ಥಸಾರಥಿ ಅವರು, “ನಮ್ಮ ವತ್ಸಣ್ಣ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಆದ್ದರಿಂದ ಅವರ ಆಶಯಕ್ಕೆ ಗೌರವ ನೀಡಿ, ಸಾರ್ವಜನಿಕರಿಗೆ ಉಚಿತವಾಗಿ ಕಬ್ಬಿನ ಹಾಲು ವಿತರಿಸುವ ಮೂಲಕ ಸ್ನೇಹಿತರೆಲ್ಲರೂ ಒಟ್ಟಾಗಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೋಗಿ ಮಂಜು, ಟಿ.ಎಸ್. ಅರುಣ್, ರವಿ, ದೀಪಕ್, ರಾಮು, ಸರ್ವಮಂಗಳ, ವಲಜ, ರೂಪ, ಚಂದ್ರಕಲಾ, ಮಧು ಸೇರಿದಂತೆ ಹಲವಾರು ಮಂದಿ ಹಾಜರಿದ್ದರು.
