ತುಮಕೂರು: ತುಮಕೂರಿನ ಪ್ರತಿಷ್ಠಿತ ಎಸ್ಆರ್ಎಸ್ ಶಾಲೆಯ ವಾಹನ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಹೋಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ತುಮಕೂರಿನ ಬಡ್ಡಿಹಳ್ಳಿ ಸಮೀಪದ ಎಸ್ಆರ್ಎಸ್ ಶಾಲಾ ಆವರಣದಲ್ಲಿ ಬಸ್ ಬೆಂಕಿಗಾಹುತಿಯಾಗಿದೆ.
ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ
ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾ ಮಾಡಿದರು.
ಘಟನೆ ವೇಳೆ ವಾಹನದಲ್ಲಿ ಯಾವುದೇ ವಿದ್ಯಾರ್ಥಿಗಳು ಇರಲಿಲ್ಲ ಹಾಗಾಗಿ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ,
ಬೆಂಕಿ ಅವಘಡಕ್ಕೆ ನಿಖರ ಕಾರಣ ಗೊತ್ತಾಗಿಲ್ಲ.
