ನವದೆಹಲಿ: ರಾಜ್ಯವಷ್ಟೇ ಅಲ್ಲಾ ಇಡೀ ದೇಶದಲ್ಲೆ ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಇನ್ನೆರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದೆ.
ಶಿಗ್ಗಾವಿಯಲ್ಲಿ ಮಾಜಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಹೈಕಮಾಂಡ್ ಟಿಕೆಟ್ ಘೋಷಿಸಿದೆ.
ಬಳ್ಳಾರಿಯ ಸಂಡೂರಿಗೆ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರ ಆಪ್ತನಿಗೆ ಮಣೆ ಹಾಕಲಾಗಿದೆ.ಬಂಗಾರು ಹನುಮಂತು ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯನ್ನು ಇದುವರೆಗೂ ಅಂತಿಮಗೊಳಿಸದೆ ಬಿಜೆಪಿ ಕಾಯ್ದು ನೋಡುವ ತಂತ್ರ ಅನುಸರಿಸಿದೆ.