ಮೈಸೂರು: ಮನೆ,ಮನೆಗಳಲ್ಲಿ ಗೊಂಬೆ ಕೂರಿಸುವ ಮೂಲಕ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದು ಸಮಾಜ ಸೇವಕ ಕೆ. ರಘುರಾಮ್ ವಾಜಪೇಯಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ಆಯೋಜಿಸಿದ್ದ ಮೈಸೂರು ದಸರಾ ಮಹೋತ್ಸವದ ದಸರಾ
ಮನೆ ಮನೆ ಗೊಂಬೆ ಕೂರಿಸುವ ಸ್ಪರ್ಧೆಯಲ್ಲಿ
ಗೆದ್ದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಸಂಸ್ಕೃತಿ ಮತ್ತು ನಮ್ಮ ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ.ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಶ್ರಮಿಸಿ,ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು.
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್ ಮಾತನಾಡಿ
ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು, ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ ಎಂದು ತಿಳಿಸಿದರು.
ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ, ಮನೆಮನೆಗಳಲ್ಲಿ ಗೊಂಬೆ ಕೂರಿಸುವ ಮೂಲಕ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದು ಬಣ್ಣಿಸಿದರು.
ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್ ಮಾತನಾಡಿ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ಸಂಸ್ಕಾರ, ಸಂಸ್ಕೃತಿ ಹಾಗೂ ನಮ್ಮ ಮೈಸೂರಿನ ಹಿರಿಮೆ ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದರು.
80ಕ್ಕೂ ಹೆಚ್ಚು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು
ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ,ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಎನ್ ಐ ಇ ಕಾಲೇಜಿನ ಪ್ರೊ.ಡಾಕ್ಟರ್ ಸಿ.ಕೆವನಮಾಲ,
ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷೆ ಸವಿತಾ ಘಾಟ್ಕೆ ಗ್ರಾಜಿಯೇಟ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕಿ ವರಲಕ್ಷ್ಮಿ ಅಜಯ್, ಚಕ್ರಪಾಣಿ, ಮಹಾನ್ ಶ್ರೇಯಸ್, ಜಯಶ್ರೀ ಶಿವರಾಂ ಮತ್ತಿತರರು ಹಾಜರಿದ್ದರು.