ಮೈಸೂರು: ಮೈಸೂರಿನ ಅಗ್ರಹಾರದಲ್ಲಿರುವ ಡಾ. ಅಣ್ಣಾಜಪ್ಪನವರ ನವಗ್ರಹ ಶ್ರೀ ಮೃತ್ಯುಂಜಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಪಾರ್ವತಿ ದೇವಿಯ 9 ನೆ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಭಾನುವಾರ ಹಮ್ಮಿಕೊಳ್ಳಲಾಗಿದೆ.

ನಾಳೆ ಮುಂಜಾನೆ 6.30ಕ್ಕೆ ಉದಯ ಲಗ್ನದಲ್ಲಿ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನೆರವೇರಿಸಲಾಗುವುದು.
ಬೆಳಗ್ಗೆ 8.30 ಗಣಪತಿ ಹೋಮ, ನವಗ್ರಹ ಹೋಮ ಮೃತ್ಯುಂಜಯ ಹೋಮ, ಪಾರ್ವತಿ ದೇವಿ ದುರ್ಗಾ ಹೋಮ ನಡೆಯಲಿದೆ.
ಬೆಳಿಗ್ಗೆ 10.30ಕ್ಕೆ ಪೂರ್ಣಾವತಿ, 11 ಗಂಟೆಗೆ ಕುಂಭಾಭಿಷೇಕ ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಕಾಲಕ್ಕೆ ಆಗಮಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ದೇವಾಲಯದ ವ್ಯವಸ್ಥಾಪಕರಾದ ಶಿವಾರ್ಚಕ ಎಸ್. ಯೋಗಾನಂದ ಅವರು ತಿಳಿಸಿದ್ದಾರೆ