ವಿಜಯೇಂದ್ರ ಮುಖ್ಯಮಂತ್ರಿ ಆಗಲಿ- ಎಲ್ ಆರ್ ಮಹದೇವಸ್ವಾಮಿ ಆಶಯ

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಈ ನಾಡಿನ ಭವಿಷ್ಯ, ಅವರು ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಜಿಲ್ಲಾಧ್ಯಕ್ಷ ಎಲ್. ಆರ್ ಮಹದೇವಸ್ವಾಮಿ ಆಶಿಸಿದರು.

ಬಿ ವೈ ವಿಜಯೇಂದ್ರ ಅವರ ಹುಟ್ಟುಹಬ್ಬದ ಪ್ರಯುಕಯ ನಗರದ ಜೀವದಾರ
ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಬಿ ವೈ ವಿಜಯೇಂದ್ರ ಅಭಿಮಾನಿ ಬಳಗ ಹಾಗೂ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ವತಿಯಿಂದ 49 ಕಾರ್ಯಕರ್ತರು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ, ಸಂಘಟನೆ ಕಲೆಗಳನ್ನ ಅರಿತಿರುವ ಅವರಿಗೆ ಇನ್ನೂ ಹೆಚ್ಚಿನ ಅಧಿಕಾರ ಸಿಗಲಿದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಸಾಮಾಜಿಕ ಚಿಂತನೆ ಮಾಡಿ ಜನಮನ್ನಣೆ ಗಳಿಸಿರುವ ಬಿ. ಎಸ್. ಯಡಿಯೂರಪ್ಪ ಅವರಂತೆ ವಿಜಯೇಂದ್ರ ಅವರೂ ಕೂಡ ತಮ್ಮ ತಂದೆಯ ಹಾದಿಯಲ್ಲಿ ಸಾಗಿ ಜನಪ್ರೀಯತೆಯನ್ನು ಗಳಿಸುತ್ತಿದಾರೆ ಎಂದು ಹೇಳಿದರು.

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವಾಸುದೇವ್,
ಮೂಡ ಮಾಜಿ ಸದಸ್ಯ ನವೀನ್ ಕುಮಾರ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಹಿತ್, ಸುಚಿಂದ್ರ,
ಸುರೇಶ್, ರೇವ್ ಜೀತ್, ,ಜಯಂತ್, ಶಾರದಾ, ಮಮತಾ, ಶಿವು ಮತ್ತಿತರರು ಹಾಜರಿದ್ದರು.