ಮೈಸೂರು: ಮೈಸೂರಿನ ಹೂಟಗಳ್ಳಿ ಕೆ ಎಚ್ ಬಿ ಬಡಾವಣೆಯಲ್ಲಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ
ಪುಣ್ಯಸ್ಮರಣೆ ಮತ್ತು ರಾಷ್ಟ್ರಕವಿ ಕುವೆಂಪು ಜಯಂತೋತ್ಸವ ಹಮ್ಮಿಕೊಳ್ಳಲಾಯಿತು.
ಬಡಾವಣೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಉದ್ಯಾನವನದಲ್ಲಿ ಸ್ವಾಮೀಜಿಯರವರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಂತರ ರಾಷ್ಟ್ರಕವಿ ಕುವೆಂಪು ವೃತ್ತದಲ್ಲಿ ಕುವೆಂಪು ಅವರ ಜಯಂತೋತ್ಸವ ಆಚರಿಸಲಾಯಿತು.
ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಸಂಘದ ಸದಸ್ಯರು ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.
ನಂತರ ಎಲ್ಲರಿಗೂ ಸಿಹಿ ವಿತರಣೆ ಮಾಡಿದರು.ಕಾರ್ಯಕ್ರಮದಲ್ಲಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ದಾಸೇಗೌಡ, ನಾಗೇಶ್, ಸುರೇಶ್, ಮೋಹನ್, ಗಿರೀಶ್, ಶಂಕರ್ ಲಿಂಗಯ್ಯ, ಪ್ರಕಾಶ್, ಚಂದ್ರು, ರಕ್ತದಾನಿ ಮಂಜು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.
