ವಿಶೇಷ ಚೇತನ ಮಕ್ಕಳಿಗೆ ಬೇಕಿರುವುದು ಕರುಣೆಯಲ್ಲ, ಕಾಳಜಿ- ಮಾ ವಿ ರಾಮಪ್ರಸಾದ್

ಮೈಸೂರು: ಚಾಮುಂಡಿಪುರಂನಲ್ಲಿರುವ ಅರುಣೋದಯ ವಿಶೇಷ ಚೇತನ ಶಾಲೆಯಲ್ಲಿ ಮಕ್ಕಳಿಗೆ ಸಮವಸ್ತ್ರ ಹಾಗೂ ಸಿಹಿ ನೀಡಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ನಗರ ಪಾಲಿಕೆ ಮಾಜಿ ಸದಸ್ಯ ಮಾ. ವಿ ರಾಮಪ್ರಸಾದ್ ಅವರು,ವಿಶೇಷ ಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಮನವಿ ಮಾಡಿದರು.

ನಮಗೆಲ್ಲ ದೇವರು ಸರಿಯಾದ ಅಂಗಾಂಗಗಳನ್ನು ನೀಡಿದ್ದಾರೆ. ಆದರೆ ಕೆಲವು ಮಕ್ಕಳಿಗೆ ನೂನ್ಯತೆಯನ್ನು ನೀಡಿದ್ದಾರೆ. ನೂನ್ಯತೆಯನ್ನು ಹೊಂದಿರುವ ಮಕ್ಕಳು ಸಮಾಜಕ್ಕೆ ಬಂದಾಗ ಅದು ದೌರ್ಬಲ್ಯ ಆಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.

ವಿಶೇಷ ಮಕ್ಕಳಿಗೆ ಬೇಕಾಗಿರುವುದು ಕರುಣೆಯಲ್ಲ, ಕಾಳಜಿ‌.ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವ ಹೆತ್ತವರು ಮತ್ತು ಶಿಕ್ಷಣ ನೀಡುವ ಶಿಕ್ಷಕರು ಹಾಗೂ ಚಿಕಿತ್ಸೆ ನೀಡುವ ವರ್ಗಕ್ಕೆ ಹೆಚ್ಚಿನ ತಾಳ್ಮೆ ಮತ್ತು ಸಹನೆಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ವಿಕಲಚೇತನ ಮಕ್ಕಳಿಗೆ ಫಿಸಿಯೋಥೆರಫಿ ಚಿಕಿತ್ಸಾ ವಿಧಾನದಿಂದ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗಳಾಗುತ್ತಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿಕಲಚೇತನ ಕ್ರೀಡಾಪಟು ಅಲೋಕ್ ಜೈನ್, ಮಹಾನ್ ಶ್ರೇಯಸ್, ಶಿಕ್ಷಕರಾದ ಮಮತಾ, ನೀಲ, ಲತಾ, ಶಿವಕುಮಾರ್ ಮತ್ತಿತರರು ಹಾಜರಿದ್ದರು.