ಮೈಸೂರು: ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸ ಹಾಗೂ ತುಳಸಿ ಹಬ್ಬದ ಪ್ರಯುಕ್ತ
ತುಳಸಿ ಕಟ್ಟೆಗೆ ವಿಶೇಷವಾಗಿ ಅಲಂಕರಿಸಿ ಪೂಜೆ ನೆರವೇರಿಸಲಾಯಿತು.

ಈ ವೇಳೆ ಭಕ್ತರಿಗೆ ಉಚಿತ ತುಳಸಿ ಗಿಡ ವಿತರಿಸಿ ಮಾತನಾಡಿದ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ಅವರು,ತುಳಸಿಗಿಡ ಹಿಂದೂ ಧರ್ಮದವರಿಗೆ ಅವಿಭಾಜ್ಯ ಅಂಗ ಮತ್ತು ಇದನ್ನು ಮನೆಯಲ್ಲಿ ಬೆಳೆಸಿ ಬಳಸಿದರೆ ವಿವಿಧ ಕಾಯಿಲೆಗಳು ಬರುವುದಿಲ್ಲ ಎಂದು ತಿಳಿಸಿದರು.
ತುಳಸಿಗಿಡವು ಯಥೇಚ್ಛವಾಗಿ ಆಮ್ಲಜನಕವನ್ನು ಉತ್ಪತ್ತಿ ಮಾಡುತ್ತದೆ ಎಂದು ತಿಳಿಸಿ ಗಿಡದಿಂದ ಆಗುವ ಉಪಯೋಗಗಳ ಬಗ್ಗೆ ವಿವರಿಸಿದರು.
ಈ ವೇಳೆ ನವೀನಾಕ್ಷ, ಜಯಮ್ಮ, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
