ಬೆಂಗಳೂರು: ಕನಕದಾಸರು ಸಂತರಷ್ಟೇ ಅಲ್ಲ, ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರಲ್ಲದೆ
ವಿಶ್ವಮಾನವರೂ ಆಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.

ಕನಕದಾಸ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಭಕ್ತ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಜನಿಸಿದರು. ಕಾಗಿನೆಲೆ ಅವರ ಕರ್ಮಭೂಮಿ. ಕಾವ್ಯ, ಕೀರ್ತನೆಗಳನ್ನು ರಚನೆ ಮಾಡಿದ್ದರು ಎಂದು ವಿವರಿಸಿದರು.
ಇದೇ ವೇಳೆ ನಾಡಿನ ಎಲ್ಲಾ ಜನರಿಗೂ ಕನಕ ಜಯಂತಿಯ ಶುಭಾಶಯಗಳನ್ನು ಮುಖ್ಯ ಮಂತ್ರಿಗಳು ತಿಳಿಸಿದರು.