ಆರ್‌ಎಸ್ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ:ಸಿದ್ದು ಟೀಕೆ

Spread the love

ಬೆಂಗಳೂರು: ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ ಆರ್‌ಎಸ್ಎಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಲಿಲ್ಲ. ಈಗ ಇದು ದೇಶಭಕ್ತಿಯ ಪಾಠ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ,
ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ, ಎಲ್ಲ ಮಾಡಿದ್ದು ಮನುಸ್ಮೃತಿ ಹೇಳಿದರು.

ಬಿಜೆಪಿ ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇದೇ ಎರಡೂ ಪಕ್ಷಕ್ಕೂ ಇರುವ ವ್ಯತ್ಯಾಸ ಎಂದು ಹೇಳಿದ ಸಿದ್ದು,ಆರ್ಎಸ್ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ ಎಂದು ಆರೋಪಿಸಿದರು.

ಪೇಜಾವರ ಶ್ರೀಗಳು ಸಂವಿಧಾನ ಬಗ್ಗೆ ಆಡಿದ ಮಾತನ್ನು ಪ್ರಸ್ತಾಪಿಸಿದ ಸಿಎಂ, ಆ ರೀತಿ ಹೇಳುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.

ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ ಎಂದು ಸಿದ್ದರಾಮಯ್ಯ ಬೇಸರ ಪಟ್ಟರು.

ಸಂವಿಧಾನದ ಧ್ಯೇಯೋದ್ದೇಶಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ, ಏಕಿನ್ನೂ ಸಮಾನತೆಯ ಸಮಾಜ ನಿರ್ಮಾಣ ಆಗಿಲ್ಲ ಎನ್ನುವುದನ್ನು ಅವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಅಂಬೇಡ್ಕರ್ ಅವರಿಗೆ ದೂರದೃಷ್ಟಿ ಇತ್ತು. ಆದ್ದರಿಂದಲೇ, ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇರಬೇಕು.ಕೆಟ್ಟವರ ಕೈಗೆ ಹೋದರೆ ಮೌಲ್ಯಗಳು ಸಾಯುತ್ತವೆ ಎಂದು ಎಚ್ಚರಿಸಿದ್ದರು ಎಂದು ಸಿಎಂ ಸ್ಮರಿಸಿದರು.