ಹರಿಶ್ಚಂದ್ರಘಾಟ್ ನಲ್ಲಿ ೧.೦೫ ಕೋಟಿ ವೆಚ್ಚದ ಕಾಮಗಾರಿಗಳಿಗೆ ಶ್ರೀವತ್ಸ‌‌ ಚಾಲನೆ

Spread the love

ಮೈಸೂರು: ಕೆ.ಆರ್ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಗುರುವಾರ
ಹರಿಶ್ಚಂದ್ರಘಾಟ್ ಸ್ಮಶಾನಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು.

ಇದೇ ವೇಳೆ ಸ್ಮಶಾನದಲ್ಲಿ೧.೦೫ ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಮಳೆ ಬಂದರೇ ನೀರು ನಿಂತು ಸಮಸ್ಯೆ ಉಂಟಾಗುತ್ತದೆ ಎಂಬ ಜನರ ದೂರಿಗೆ ಸ್ಪಂದಿಸಿ, ಮುಡಾ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಸ್ಮಶಾನದಲ್ಲಿ ಪರಿಶೀಲಿಸಿ, ಸಮಸ್ಯೆ ಪರಿಹಾರಕ್ಕೆ ಕೂಡಲೇ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಸ್ಮಶಾನದ ಆವರಣದಲ್ಲಿ ಸುಮಾರು ೯೮ ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಯೋಗ್ಯಾಸ್ ಉತ್ಪಾದನೆಯ ಕಾಮಗಾರಿಯನ್ನು ಪರಿಶೀಲಿಸಿ, ಅಗತ್ಯ ಮಾಹಿತಿ ಪಡೆದುಕೊಂಡು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಆದೇಶಿಸಿದರು.

ಇದೇ ವೇಳೆ ಪಿಂಜರಾಪೋಲ್ ರಸ್ತೆಯಲ್ಲಿ ಸಂಚರಿಸಿ ಈ ಮಾರ್ಗದಲ್ಲಿ ಮಳೆ ನೀರು ಮುಂದಕ್ಕೆ ಹರಿಯದೇ ತೊಂದರೆ
ಯಾಗುತ್ತಿರುವುದಕ್ಕೆ ಮಾರ್ಗ ಮಧ್ಯೆ ಕೌಂಪೌಂಡ್ ನಿರ್ಮಾಣ ಮಾಡಿರುವುದೆ ಕಾರಣ ಎಂಬುದನ್ನು ತಿಳಿದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಮಳೆ ನೀರು ಸರಾಗವಾಗಿ ಹರಿಯಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಶ್ರೀವತ್ಸ ನಿರ್ದೇಶಿಸಿದರು.