ಮೈಸೂರು,ಡಿ.1: ಮೈಸೂರಿನ ಕೃಷ್ಣರಾಜ ಠಾಣೆ ಪೊಲೀಸರು ಮನೆಯೊಂದರಲ್ಲಿ ಚಿನ್ನಾಭರಣ ದೋಚಿದ್ದ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರಿನ ರಾಮಾನುಜ ರಸ್ತೆ, 18ನೇ ಕ್ರಾಸ್ ನ ಮನೆಯೊಂದರಲ್ಲಿ ಚಿನ್ನಾಭರಣಗಳು ಕಳುವಾಗಿದ್ದವು.
ಈ ಬಗ್ಗೆ ಕೃಷ್ಣರಾಜ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು.
ನವೆಂಬರ್ 29 ರಂದು ಗಸ್ತಿನಲ್ಲಿರುವಾಗ ದೊರೆತ ಖಚಿತ ಮಾಹಿತಿ ಮೇರೆಗೆ ಮೈಸೂರು ನಗರ ಕಾಡಾ ಕಚೇರಿ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆರೋಪಿ ಕಳವು ಮಾಡಿದ್ದರ ಬಗ್ಗೆ ಬಾಯಿ ಬಿಟ್ಟಿದ್ದಾನೆ.
ಆರೋಪಿಯಿಂದ 2.35,000ರೂ ಮೌಲ್ಯದ 26ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಬೆಂಗಳೂರಿನ ಕೊಣನಕುಂಟೆ ಪೊಲೀಸ್ ಠಾಣೆಯ ದ್ವಿಚಕ್ರ ವಾಹನ ಕಳುವು ಪ್ರಕರಣಕ್ಕೆ ಸಂಬಂಧಪಟ್ಟ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರು ನಗರದ ಕೇಂದ್ರಸ್ಥಾನ, ಸಂಚಾರ ಮತ್ತು ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತರವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ವಿಭಾಗದ ಎಸಿಪಿ ರಮೇಶ್ ಕುಮಾರ್ ಹೆಚ್.ಬಿ ಅವರ ನೇತೃತ್ವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮೊಹೀತ್ ಸಹದೇವ, ಪಿ.ಎಸ್.ಐ ಲಕ್ಕಪ್ಪ ಹೆಚ್.ಕುಕ್ಕಡಿ, ಮತ್ತು ಸಿಬ್ಬಂದಿಗಳಾದ ನಟರಾಜು, ಮೊಖದ್ದರ್ ಷರೀಪ್, ಕಾರ್ತಿಕಕುಮಾರ್, ಪ್ರಸಾದ್, ಸವಿತಾ, ಅಶ್ವಿನಿ ಮತ್ತು ತಾಂತ್ರಿಕ ವಿಭಾಗದ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
