ಮೈಸೂರು: ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಯ ದೇವರಾಜ ಅರಸು ಕಾಲೋನಿಯಲ್ಲಿ(ವಿಶ್ವೇಶ್ವರನಗರ) ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಶಂಕುಸ್ಥಾಪನೆ ನೆರವೇರಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾಗಿರುವ ಒಂದು ಕೋಟಿ ರೂ.ವೆಚ್ಚದ ಕಾಮಗಾರಿಯನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ(ಕೆಆರ್ಐಡಿಎಲ್) ವಹಿಸಿಕೊಂಡಿದೆ.
ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಶಾಸಕರು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಮಂಜೂರಾಗಿದ್ದು, ಇದನ್ನು ಕೆಆರ್ಐಡಿಎಲ್ ವತಿಯಿಂದ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.
ಗುಣಮಟ್ಟದ ಕಾಮಗಾರಿ ಮಾಡಲು ಸರ್ಕಾರಿ ಸ್ವಾಮ್ಯದ ಸಂಸ್ಥೆಗೆ ವಹಿಸಲಾಗಿದೆ ಎಂದರು.
ದೇವರಾಜ ಅರಸು ಕಾಲೋನಿಯಲ್ಲಿ ದಲಿತರು,ಪೌರ ಕಾರ್ಮಿಕ ಸಮುದಾಯದ ಜನರು ಹೆಚ್ಚಾಗಿ ವಾಸಮಾಡುತ್ತಿದ್ದಾರೆ. ಶುಭ ಸಮಾರಂಭಗಳನ್ನು ಮಾಡಲು ಸಮುದಾಯ ಭವನದ ಅಗತ್ಯವಿದೆ ಎಂಬ ಮನವಿ ಪರಿಗಣಿಸಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶ್ರೀವತ್ಸ ತಿಳಿಸಿದರು.
ಕಟ್ಟಡ ನಿರ್ಮಾಣಗೊಂಡ ಬಳಿಕ ಸಾರ್ವಜನಿಕರು ಬಳಸಬೇಕು ಎಂದು ಸಲಹೆ ನೀಡಿದರು.
ಕೆಆರ್ಇಡಿಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅರ್ಚನ, ಸಹಾಯಕ ಅಭಿಯಂತರ ವಿವೇಕ್, ನಗರಪಾಲಿಕೆ ಮಾಜಿ ಸದಸ್ಯೆ ಶಾಂತಮ್ಮ ವಡಿವೇಲು, ಕೆಆರ್ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯರಾಮು, ಆದಿದ್ರಾವಿಡ ಮಹಾಸಭಾದ ಮುಖಂಡರಾದ ಎನ್.ಮಾರ, ಶ್ರೀನಿವಾಸ್, ವಿಜಯ, ಮಂಜಯ್ಯ,ಮಹದೇವು, ನಾಗರಾಜು, ಯೋಗಾನಂದ,ಪಳನಿಸ್ವಾಮಿ ಮತ್ತಿತರ ಮುಖಂಡರು ಹಾಜರಿದ್ದರು.
