ನಾಳೆ ಕನ್ನಡ ಸಿರಿ ಸಂಭ್ರಮ ಸಂಗೀತ ರಸಮಂಜರಿ ಕಾರ್ಯಕ್ರಮ

ಮೈಸೂರು: ಪಿ ಎಂ ಕ್ರಿಯೇಷನ್ ಪುರುಷೋತ್ತಮ್ ತಂಡದ 9ನೇ ವರ್ಷದ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಚಿತ್ರಗೀತೆಗಳ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಡಿ.7 ರಂದು ಹಮ್ಮಿಕೊಳ್ಳಲಾಗಿದೆ.

ವಿದ್ಯಾರಣ್ಯಪುರಂನಲ್ಲಿರುವ ಸಾರ್ವಜನಿಕ ಹಾಸ್ಟೆಲ್ ನಲ್ಲಿ ನಾಳೆ ಸಂಜೆ 6.30ಕ್ಕೆ ಕನ್ನಡ ಸಿರಿ ಸಂಭ್ರಮ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪಿ ಎಂ ಕ್ರಿಯೇಶನ್ಸ್ ತಂಡದ ಸಂಸ್ಥಾಪಕರಾದ ಪುರುಷೋತ್ತಮ್ ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಟಿ ಎಸ್ ಶ್ರೀವತ್ಸ, ವಿಧಾನಪರಿಷತ್ ಸದಸ್ಯ ವಿವೇಕಾನಂದ, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕ ಸುದರ್ಶನ್, ಮೈಸೂರ್ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ,ನಗರ ಪಾಲಿಕೆ ಮಾಜಿ ಸದಸ್ಯ ಮ ವಿ ರಾಮಪ್ರಸಾದ್ ಮತ್ತಿತರರು ಆಗಮಿಸಲಿದ್ದಾರೆ ಎಂದು ‌ಅವರು ಹೇಳಿದ್ದಾರೆ.