ಮೈಸೂರು: ಮೈಸೂರು-ಬೆಂಗಳೂರು ಹೈವೇ ಕೆಂಪೇಗೌಡ ವೃತ್ತದ ಬಳಿ (ಮಣಿಪಾಲ್ ಆಸ್ಪತ್ರೆ ಬಳಿ) ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ ಎಂದು ಸಂಸದ
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಶೀಘ್ರದಲ್ಲೇ ಇದಕ್ಕೆ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.
ಮೈಸೂರು-ಬೆಂಗಳೂರು ಹೈವೇಯಲ್ಲಿ ಬರುವ ಪ್ರಮುಖ ಪಟ್ಟಣಗಳಿಗೆ ಹೋಗಲು ಟೋಲ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತದೆ.
ಹೈವೇಯ ಎರಡು ಕಡೆ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತದೆ,
ಸುಮಾರು 711 ಕೋಟಿ ಅಂದಾಜು ವೆಚ್ಚದಲ್ಲಿ ಕೆಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಮೂಡ ಹಗರಣ ಬಗ್ಗೆ ಸಂಸತ್ ನಲ್ಲಿ ಚರ್ಚಿಸಲಾಗಿದೆ,ಈ ಹಿಂದೆ ಸಂಸತ್ ನಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿತ್ತು.
ಈ ಬಾರಿಯು ಕೂಡ ಚರ್ಚಿಸುತ್ತೇವೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ಈ ಕುರಿತು ಮಾತನಾಡುತ್ತೇವೆ.
ಕೇವಲ ಮೂಡ ಹಗರಣ ಅಷ್ಟೇ ಅಲ್ಲ ವಾಲ್ಮೀಕಿ ಹಗರಣದ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ ಎಂದು ಯದುವೀರ್ ತಿಳಿ ಸಿದರು.
ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣಕ್ಕೆ ಪ್ರತಿಕ್ರಿಯಿಸಿ
ಈ ಕುರಿತು ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಹೇಳಿದ ಯದುವೀರ್,
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
