ಮೈಸೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿಗೆ ಸರ್ಕಾರದ ನಿರ್ಲಕ್ಷ್ಯ ಕಾರಣ ಎಂದು ಬಿಜೆಪಿ ನಗರ ಉಪಾಧ್ಯಕ್ಷೆ ಹೇಮಾನಂದೀಶ್ ಆರೋಪಿಸಿದ್ದಾರೆ.
ಆರೋಗ್ಯ ಸಚಿವರು ಮತ್ತು ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ಸಾವು ಸಂಭವಿಸಿವೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಹೆಚ್ಚಿನ ಕಮಿಷನ್ ಆಸೆಗಾಗಿ ಕಪ್ಪು ಪಟ್ಟಿಯಲ್ಲಿರುವ ಕಂಪನಿಗಳಿಂದ ಔಷಧ ಖರೀದಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡುವ ಮೂಲಕ ಬಾಣಂತಿಯರು, ಹಸುಗೂಸುಗಳು ಹಾಗೂ ಬಡಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಕೂಡಲೆ ಮೃತ ಬಾಣಂತಿಯರ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು, ಔಷಧ ಖರೀದಿ ಬಗ್ಗೆ ತನಿಖೆಯಾಗಬೇಕು, ಪ್ರಕರಣಗಳಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಹೇಮಾ ನಂದೀಶ್ ಒತ್ತಾಯಿಸಿದ್ದಾರೆ.
