ನವದೆಹಲಿ: ವಿಶ್ವವಿಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಅವರು ಭಾನುವಾರ ಅಮೆರಿಕದಲ್ಲಿ ನಿಧನರಾಗಿದ್ದಾರೆ.
ಅವರಿಗೆ 73 ವರ್ಷಗಳಾಗಿತ್ತು.
ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
ಭಾರತ ಸೇರಿದಂತೆ ವಿದೇಶಗಳಲ್ಲಿ ಅವರು ಪ್ರಸಿದ್ದರಾಗಿದ್ದರು. ಹಲವಾರು ಹಾಲಿವುಡ್ ಚಿತ್ರಗಳಲ್ಲಿ ಕಾರ್ಯ ನಿರ್ವಹಿಸಿದ್ದರು.
ಸದ್ಯ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಜಾಕಿರ್ ಹುಸೇನ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು, ಹಾಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.
ಆದರೆ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಮಾರ್ಚ್ 9, 1951 ರಂದು ಮುಂಬೈನಲ್ಲಿ ಜನಿಸಿದ ಜಾಕಿರ್ ಹುಸೇನ್, ಚಿಕ್ಕ ವಯಸ್ಸಿನಿಂದಲೂ ಸಂಗೀತದ ವಾತಾವರಣದಲ್ಲಿ ಬೆಳೆದವರು. ಅವರ ತಂದೆಯ ಕಟ್ಟುನಿಟ್ಟಿನ ಮಾರ್ಗದರ್ಶನದಲ್ಲಿ ಜಾಕಿರ್ ಹುಸೇನ್ ಅಸಾಧಾರಣ ಪ್ರತಿಭೆಯಾಗಿ ಹೊರಹೊಮ್ಮಿದರು.
ಜಾಕಿರ್ ಹುಸೇನ್ ಅವರಿಗೆ 5 ಗ್ರ್ಯಾಮಿ ಪ್ರಶಸ್ತಿಗೆ ಭಾಜನರಾಗಿದ್ದರು. 1988ರಲ್ಲಿ ಪದ್ಮಶ್ರೀ ಪ್ರಶಸ್ತಿ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯ ಗರಿಗಳು ಮುಡಿಗೇರಿದ್ದವು.
ಪ್ರಧಾನಿ ಮೋದಿ,ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕರ್ನಾಟಕ
ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಜಾಕಿರ್ ಹುಸೇನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.