ಮೈಸೂರು: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು
ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಿ ಇತರರಿಗೆ ಮಾದರಿಯಾಗಿದ್ದಾರೆ.

ನಗರದ ಶ್ರೀರಾಂಪುರದಲ್ಲಿರುವ ಮರ್ಸಿ ಕಾನ್ವೆಂಟ್ ಶ್ರವಣದೋಷವುಳ್ಳ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು, ಹಂಪಲು ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸುವ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಅವರ ಜನುಮದಿನ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಜೆಡಿಎಸ್ ಮೈಸೂರು ನಗರ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಎಚ್ ಡಿ ಕುಮಾರಸ್ವಾಮಿಯವರಿಗೆ ದೇವರು ಆಯಸ್ಸು, ಆರೋಗ್ಯ ಕೊಟ್ಟು
ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗುವಂತೆ ಮಾಡಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಕೆ ಎಮ್ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಮೈಸೂರು ನಗರ ಜೆ.ಡಿ.ಎಸ್. ಮಾಜಿ ಮಹಾ ಪ್ರಧಾನ ಕಾರ್ಯದರ್ಶಿ ಪಿ.ಎಸ್. ರಾಜಶೇಖರ ಮೂರ್ತಿ, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್ ,ವೀರಭದ್ರ ಸ್ವಾಮಿ, ಸುಬ್ರಮಣಿ,ಮಹದೇವ್,ಯಶ್ವಂತ್ ಕುಮಾರ್, ಸಿದ್ದಲಿಂಗ ಸ್ವಾಮಿ,ಶ್ರೀಧರ್, ಮಹೇಶ್, ಎಸ್ ಪಿ ಅಕ್ಷಯಪ್ರಿಯದರ್ಶನ, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.
