ಮೈಸೂರು: ವಿದ್ಯಾರ್ಥಿಗಳಲ್ಲಿ ಗುರಿ ಮತ್ತು ಛಲ ಇದ್ದರೆ ಕ್ರೀಡಾ ಸಾಧನೆಗೆ ಒಳಿತು ಎಂದು
ಜ್ಯೋತಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ
ಎ ಎಸ್ ಚನ್ನಬಸಪ್ಪ ತಿಳಿಸಿದರು.
ನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ಜ್ಯೋತಿ ಶಿಕ್ಷಣ ಸಂಸ್ಥೆ ಮತ್ತು ಶ್ರೀ ಪ್ರಣಮ್ಯ ಎಜುಕೇಶನ್ ಟ್ರಸ್ಟ್ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.
2024ರ ವಿಶ್ವ ಚೆಸ್ ಚಾಂಪಿಯನ್ ಗುಕೇಶ್ ಅವರ ಕ್ರೀಡಾ ಸಾಧನೆಯನ್ನು ಸ್ಮರಿಸಿದ ಅವರು,ವಿದ್ಯಾರ್ಥಿಗಳು ಅವರಂತೆ ಸಾಧನೆ ಮಾಡಬೇಕೆಂದು ಸಲಹೆ ನೀಡಿದರು.
ಶ್ರೀ ಪ್ರಣಮ್ಯ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷೆ ಸವಿತಾ ವಿ.ಪಿ ಅವರು ಕ್ರೀಡೆಯಲ್ಲಿ ಭಾರತೀಯ ಮಹಿಳಾ ಆಟಗಾರ್ತಿಯರ ಕೊಡುಗೆಯನ್ನು ಸ್ಮರಿಸಿದರು.
ಕಾರ್ಯಕ್ರಮವನ್ನು ಪಂಜು ಬೆಳಗಿಸಿ, ಬಿಳಿಯ ಪಾರಿವಾಳಗಳನ್ನು ಹಾರಿಸುವ ಮೂಲಕ ಚಾಲನೆ ನೀಡಿದುದು ವಿಶೇಷವಾಗಿತ್ತು.
ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಜ್ಯೋತಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಎ.ಸಿ ಅರವಿಂದ್, ನಿವೃತ್ತ ಮುಖ್ಯೋಪಾಧ್ಯಾಯರಾದ ಪರಮೇಶ್ವರ್, ಜ್ಯೋತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಭರತ್ ರಾಜ್ .ಬಿ ಸೇರಿದಂತೆ ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.@
