ಮೈಸೂರು: ಸಮೃದ್ಧಿ ವಾರ್ತೆ ಪತ್ರಿಕೆಯ
2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಮೈಸೂರಿನ ವಿಜಯನಗರದ
ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಬಿಡುಗಡೆ ಮಾಡಲಾಯಿತು.
ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರು ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್,ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಎನ್.ಕೆ. ಲೋಕನಾಥ್,
ದಿವಂಗತ ವರ ನಟ ಡಾ. ರಾಜ್‌ಕುಮಾರ್ ಪುತ್ರಿ ಲಕ್ಷ್ಮಿ ಹಾಗೂ ಅಳಿಯ ಗೋವಿಂದರಾಜು,ಸಮೃದ್ಧಿ ವಾರ್ತೆ ಪತ್ರಿಕೆಯ ಸಂಪಾದಕಿ ಸಹನ ಗೌಡ,ಮೈಸೂರು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಲಿಂಗರಾಜು, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್,ಮಾತೃತ್ವ ಹೆಲ್ತ್ ಕೇರ್ ಸಂಸ್ಥಾಪಕ ಚೇತನ್, ಉದ್ಯಮಿ ಹೇಮಂತ್ ಕುಮಾರ್ ಮತ್ತಿತರರು ಹಾಜರಿದ್ದರು.
