ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

ಮೈಸೂರು: ಮೈಸೂರಿನ ಕೆ ಎಚ್ ಬಿ ಹೂಟಗಳ್ಳಿ,ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದೆ.

ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಹೆಬ್ಬಾಳದಲ್ಲಿರುವ ಆದಿಚುಂಚನಗಿರಿ ಶಾಖಾ ಮಠ, ಲಕ್ಷ್ಮೀಕಾಂತ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಯಿತು‌.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರ ಸಾನಿಧ್ಯದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿಸಲಾಯಿತು.

ಈ‌ ವೇಳೆ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.