ಮೈಸೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ
ಮೈಸೂರಿನ ನಂಜುಮಳಿಗೆ ಸಮೀಪ ಇರುವ ಶ್ರೀ ವೇಣುಗೋಪಾಲ ಕೃಷ್ಣ ಸ್ವಾಮಿ ದೇವಸ್ಥಾನ ಮುಂಭಾಗ ಅಪೂರ್ವ ಸ್ನೇಹ ಬಳಗದ ವತಿಯಿಂದ ಗೋ ಪೂಜೆ ನೆರವೇರಿಸಿ ಗೋವುಗಳಿಗೆ ಮೇವು ವಿತರಿಸಲಾಯಿತು.

ಈ ವೇಳೆ ಮಾತನಾಡಿದ ನಗರಪಾಲಿಕೆ ಮಾಜಿ ಸದಸ್ಯ ಮ ವಿ ರಾಮಪ್ರಸಾದ್,
ಕೃಷ್ಣ ಪರಮಾತ್ಮ ಬೋಧಿಸಿದ ಗೀತೋಪದೇಶದ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಉತ್ತಮವಾದ ಸಮಾಜ ನಿರ್ಮಾಣ ಮಾಡೋಣ ಎಂದು ಕರೆ ನೀಡಿದರು.
ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್ ಮಾತನಾಡಿ,ಶ್ರೀಕೃಷ್ಣನ ಕೊಳಲು ಪ್ರೀತಿ ಸಹೋದರತ್ವದ ಸಂಕೇತವಾಗಿದೆ ಎಂದು ಹೇಳಿದರು.
ಸೋದರತ್ವದ ಸಂಕೇತವಾದ ಶ್ರೀಕೃಷ್ಣನ ಕೊಳಲನ್ನು ನಾವಿಂದು ಮರೆತು ಬಿಟ್ಟಿದ್ದೇವೆ,
ಮಹಾಭಾರತ ಯುದ್ಧ ಮನುಷ್ಯನ ಜೀವನದಲ್ಲಿ ನಿತ್ಯ ನಡೆಯುವ ಘಟನೆಗಳೇ ಆಗಿವೆ. ಪ್ರೀತಿ, ವಿಶ್ವಾಸದಿಂದ ಬದುಕಿದರೆ ಎಲ್ಲರ ಮನಸ್ಸನ್ನು ಗೆಲ್ಲಬಹುದು ಎಂಬ ಸಂದೇಶ ಶ್ರೀಕೃಷ್ಣ ದೇವರು ನೀಡಿದ್ದಾರೆ.
ಸತ್ಯ, ನ್ಯಾಯಕ್ಕಾಗಿ ಹೋರಾಟ ನಡೆಸಿದ ಶ್ರೀಕೃಷ್ಣ. ಸಮಾಜದಲ್ಲಿ ಇಂದಿಗೂ ಕಂಸ, ದುರ್ಯೋಧನರು ಇದ್ದಾರೆ, ಅಂತಹ ಶಕ್ತಿಯ ನಾಶಕ್ಕೆ ಪ್ರಯತ್ನ ಮಾಡುವ ಚಿಂತನೆ ಮಾಡಬೇಕಾಗಿದೆ ಎಂದು ತಿಳಿಸಿದರು.
ಈ ವೇಳೆ ಅಂಬಲೆ ಶಿವಣ್ಣ, ರಾಕೇಶ್ , ಆನಂದ್, ಪ್ರಕಾಶ್, ಧನರಾಜ್ ಮತ್ತಿತರರು ಹಾಜರಿದ್ದರು.