ನಜರ್ ಬಾದ್ ನಟರಾಜರಿಗೆ ನಿಗಮ ಮಂಡಳಿ ಅಧ್ಯಕ್ಷಗಾದಿ ಕೊಡಲು ಸಿಎಂ ರಲ್ಲಿ ಮನವಿ ಮಾಡಿದ ಮುಖಂಡರು

Spread the love

ಮೈಸೂರು: ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ ಅವರಿಗೆ ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಥವಾ ರಾಜ್ಯದ ಯಾವುದಾದರೂ ನಿಗಮ ಮಂಡಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಯಿತು.

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮುಖಂಡರು ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು.

ಸುಮಾರು 28 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಯುವ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ, ಡಿಸಿಸಿ ಸದಸ್ಯರಾಗಿ ಮತ್ತು ಕರ್ನಾಟಕ ರಾಜ್ಯ ಅಹಿಂದ ಯುವ ಘಟಕದ ಉಪಾಧ್ಯಕ್ಷರಾಗಿ ಪಕ್ಷಕ್ಕಾಗಿ ನಜರ್ ನಟರಾಜ್ ಶ್ರಮಿಸಿದ್ದಾರೆ ಎಂದು ಮುಖಂಡರು ಸಿದ್ದರಾಮಯ್ಯ ಅವರಿಗೆ ಮನದಟ್ಟು ಮಾಡಿದರು.

ವಿಧಾನಸಭೆ, ಲೋಕಸಭೆ, ನಗರ ಪಾಲಿಕೆ, ಜಿಲ್ಲಾ, ತಾಲೂಕು,ಗ್ರಾಮ ಪಂಚಾಯಿತಿಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಸಕ್ರಿಯವಾಗಿ ಕೆಲಸ ಮಾಡಿ ಅವರ ಗೆಲುವಿಗೆ ಶ್ರಮಿಸಿದ್ದಾರೆ. ಮತ್ತು ಎಲ್ಲಾ ಮುಖಂಡರು ಪಕ್ಷದ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಜರ್ ಬಾದ್ ನಟರಾಜ್ ಅವರನ್ನು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರು ಅಥವಾ ರಾಜ್ಯದ ಯಾವುದಾದರೂ ಒಂದು ನಿಗಮ ಮಂಡಳಿಗೆ ನೇಮಕ ಮಾಡುವಂತೆ ಚಾಮುಂಡೇಶ್ವರಿ ಕ್ಷೇತ್ರದ ಸುಮಾರು 80 ಕಾಂಗ್ರೆಸ್ ಮುಂಚೂಣಿ ಘಟಕದ ನಾಯಕರುಗಳು ಮನವಿ ಸಲ್ಲಿಸಿದರು.

ಈ ವೇಳೆ ಇಲವಾಲ ಜಿ .ಪಂ ಕ್ಷೇತ್ರದ ಆಕಾಂಕ್ಷಿ ಸ್ವಾಮಿ ಗೌಡ ( ರಾಜೇಶ್) ಮಾಜಿ ಜಿ. ಪಂ ಸದಸ್ಯ ಅರುಣ್ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಶಿವಣ್ಣ, ಮಹೇಶ್, ಕೋಳಿ ಸುರೇಶ್, ಪಾಶ,ಮಂಜುನಾಥ್ ಗೌಡ ಮಾಟಿಕ್ಯಾತನಹಳ್ಳಿ ಮತ್ತಿತರ ಹಲವಾರು ಮುಖಂಡರುಗಳು ಹಾಜರಿದ್ದರು.