ಮೈಸೂರು: ಯಡಿಯೂರಪ್ಪನವರು ಕೋರ್ಟ್ ದಯದಿಂದ ಹೊರಗಡೆ ಇದ್ದಾರೆ,
ಈ ವಯಸ್ಸಿನಲ್ಲಿ ಫೋಕ್ಸೋ ಕೇಸ್ ಹಾಕಿಸಿಕೊಂಡಿದ್ದಾರೆ,82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.
ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿಎಂ ರಾಜೀನಾಮೆ ಎಂಬ ಯಡಿಯೂರಪ್ಪ ಹೇಳಿಕೆಗೆ ಗರಂ ಆದರು.
82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ,
ಅವರು ರಾಜಕೀಯ ನಿವೃತ್ತಿ ಆಗಬೇಕಿತ್ತು, ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ಅವರು ಚೆಕ್ ಮೂಲಕ ಹಣ ಪಡೆದಿದ್ದರು,ಡಿನೋಟಿಫಿಕೇಷನ್ ಮಾಡಿದ್ದರು,ಅವರ ಪ್ರಕರಣವೇ ಬೇರೆ ನನ್ನ ಪ್ರಕರಣವೇ ಬೇರೆ.
ನನ್ನ ಬಗ್ಗೆ ಮಾತನಾಡುವ ನೈತಿಕತೆ ಯಡಿಯೂರಪ್ಪ ಅವರಿಗಿಲ್ಲ ಎಂದು ತಿರುಗೇಟು ನೀಡಿದರು.
ಬಿಜೆಪಿ ಜೆಡಿಎಸ್ ನವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ,ನನ್ನ ಟಾರ್ಗೆಟ್ ಮಾಡಿ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ,ಇವರ ಸುಳ್ಳುಗಳಿಂದ ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ,
ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ ಎಂದು ತಿರುಗೇಟು ನೀಡಿದರು.