ಎಂಬಿಪಾ ಗೆ ಆದರದ ಸ್ವಾಗತ ಕೋರಿದ ಮುಖಂಡರು

ಮೈಸೂರು: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಇಂದು ಮೈಸೂರಿಗೆ ಭೇಟಿ ನೀಡಿದ್ದರು.

ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಆಗಮಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರಿಗೆ ಹೂ ಗುಚ್ಛ ನೀಡಿ ಆದರದಿಂದ ಸ್ವಾಗತಿಸಲಾಯಿತು.

ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಕೆ ಆರ್ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರದೀಪ್ ಕುಮಾರ್, ಹಿಂದುಳಿದ ವರ್ಗದ ಉಪಾಧ್ಯಕ್ಷ ರಮೇಶ್ ರಾಮಪ್ಪ ಮತ್ತು ಇತರೆ ಮುಖಂಡರು ಹಾಜರಿದ್ದು ಸಚುವರನ್ನು ಆತ್ಮೀಯವಾಗಿ ಸ್ವಾಗತಿಸಿ ಶುಭ ಕೋರಿದರು.