ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹ್ಯಾಟ್ರಿಕ್ ಹೀರೊ ಶಿವರಾಜ ಕುಮಾರ್ ಅವರ ಆರೋಗ್ಯ ವಿಚಾರಿಸಿದರು.

ನಾಗವಾರದಲ್ಲಿನ ಶಿವಣ್ಣ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಆರೋಗ್ಯ ವಿಚಾರಿಸಿ ಗಿಡ ನೀಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಗೀತಾ‌ ಶಿವರಾಜಕುಮಾರ್ ಹಾಗೂ ಚಿತ್ರರಂಗದ ಕೆಲವರು ಉಪಸ್ಥಿತರಿದ್ದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ನಂತರ ಹಿಂತಿರುಗಿ ಬಂದಿದ್ದಾರೆ ಹಾಗಾಗಿ ಅವರ ಆರೋಗ್ಯವನ್ನು ವಿಚಾರಿಸಲು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯ ಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು ಎಂದರು‌

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ಹೇಳಿದ್ದಾರೆ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದೇನೆ ಎಂಬುದಾಗಿ ಸಿದ್ದರಾಮಯ್ಯ ಹೇಳಿದರು.