ಖ್ಯಾತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಖ್ಯಾತ ಸಂಗೀತ ಸಂಯೋಜಕರೂ ನಿರ್ದೇಶಕರೂ ಆದ ಎ.ಆರ್.ರೆಹಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರ ಮುಂಜಾನೆ ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ವೈದ್ಯರು ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಕೆಲ ಪರೀಕ್ಷೆಗಳನ್ನು ನಡೆಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅವರು ಆಂಜಿಯೋಗ್ರಾಮ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸದ್ಯ ಅವರಿಗೆ ಯಾವುದೇ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.